Puttur, ಏಪ್ರಿಲ್ 15 -- Puttur Jatre 2025: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರದ ಆಗಮನದ ದಿನ ಮತ್ತು ಎಪ್ರಿಲ್ 17 ರಂದು ಬ್ರಹ್ಮರಥೋತ್ಸವ ನಡೆಯಲಿರುವುದರಿಂದ ಎಪ್ರಿಲ್ 16 ಮತ್ತು 17 ರಂದು ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಆದೇಶಿಸಿದ್ದಾರೆ.

ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಮಾಮೂಲು ಪ್ರಕಾರ ಬರುವ ಕಿರುವಾಳು ಬಪ್ಪಳಿಗೆಯಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟಿ ಹೋಗುವ ಸಮಯದಲ್ಲಿ ಸುಗಮ ಸಂಚಾರಕ್ಕಾಗಿ, ಈ ಸಮಯದಲ್ಲಿ ಸಂಪ್ಯ ಕಡೆಯಿಂದ ಮಂಗಳೂರು- ಕಬಕ ಕಡೆಗೆ ಹೋಗುವ ವಾಹನಗಳು ಅಶ್ವಿನಿ ಜಂಕ್ಷನ್ ದರ್ಬೆ ಜಂಕ್ಷನ್-ಬೆದ್ರಾಳ- ಸಾಲ್ಮರ- ಪಡೀಲ್ ಮೂಲಕ ಸಂಚರಿಸಬೇಕು. ಮಂಗಳೂರು -ವಿಟ್ಲ - ಕಬಕ - ಕಡೆಯಿಂದ ಬರುವ ವಾಹನಗಳು ಲಿನೆಟ್ ಜಂಕ್...