Bengaluru, ಏಪ್ರಿಲ್ 5 -- Puneeth Nivasa Trailer: ಸ್ಯಾಂಡಲ್‌ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆದರ್ಶ, ವ್ಯಕ್ತಿತ್ವವನ್ನು ಪರಿಚಯಿಸುವಂಥ ಅನೇಕ ಚಲನಚಿತ್ರಗಳು ಕನ್ನಡದಲ್ಲಿ ನಿರ್ಮಾಣವಾಗಿವೆ. ಅಂಥಾ ಮತ್ತೊಂದು ಚಿತ್ರವೇ ʻಪುನೀತ್ ನಿವಾಸʼ. ಪುಟ್ಟಣ್ಣ ಕಣಗಾಲ್‌ರಂಥ ಹಿರಿಯ ನಿರ್ದೇಶಕರಿಗೆ ಸಹಾಯಕರಾಗಿದ್ದ ನಾಗೇಂದ್ರ ಪ್ರಸಾದ್ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಶ್ರೀಪಂಚಮಿ ಸಿನಿ ಕ್ರಿಯೇಷನ್ಸ್ ಮೂಲಕ ಎಸ್.ಮೋಹನ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ.
ಪುನೀತ್ ರಾಜ್‌ಕುಮಾರ್ ಅವರ ಅಪ್ಪಟ ಅಭಿಮಾನಿ ಮಲ್ಲು ಎಂಬ ಹುಡುಗನ ಕಥೆಯೇ ಈ ಪುನೀತ್ ನಿವಾಸ. ಒಂದು ಸಿನಿಮಾ ಮಾಡಬೇಕೆಂದು ಹೊರಟ ಆತ ಕೊನೆಗೂ ಆ ಸಿನಿಮಾ ಮಾಡಿದ್ನಾ ಇಲ್ವಾ? ಪುನೀತ್ ಅವರ ಆದರ್ಶಗಳನ್ನು ಆತ ಹೇಗೆ ಪಾಲಿಸುತ್ತಾನೆ? ಎಂಬುದನ್ನು ಈ ಚಿತ್ರದ ಮೂಲಕ ನಿರ್ದೇಶಕ ನಾಗೇಂದ್ರ ಪ್ರಸಾದ್ ಹೇಳಹೊರಟಿದ್ದಾರೆ. ಈ ಸಿನಿಮಾ ಮೋಹನ್ ಅವರ ಕನಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.