Bengaluru, ಮಾರ್ಚ್ 25 -- ಬೆಂಗಳೂರು: ಪೂಜೆ ಮಾಡಿ ಸಮಸ್ಯೆಗಳನ್ನು ಪರಿಹರಿಸುವ ಹೆಸರಿನಲ್ಲಿ ವಿವಾಹಿತ ಮಹಿಳೆಯೊಬ್ಬರಿಗೆ ವಂಚಿಸಿದ್ದ ಆರೋಪದಡಿ ಕಿರಣ್ ಗುರೂಜಿ ಹಾಗೂ ಲೋಹಿತ್ ಎಂಬುವವರ ವಿರುದ್ಧ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 49 ವರ್ಷದ ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯ ಪತಿ ವಿದೇಶದಲ್ಲಿ ನೆಲೆಸಿದ್ದಾರೆ. ಮಹಿಳೆ ತಮ್ಮ ತಂದೆಯೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ಮೂರು ವರ್ಷಗಳ ಹಿಂದೆ ಪರಿಚಯವಾಗಿದ್ದ ಕಿರಣ್ ಕುಮಾರ್ ಎಂಬ ಜ್ಯೋತಿಷಿ, ನಿಮ್ಮ ಕುಟುಂಬದ ಮೇಲೆ ವಾಮಾಚಾರ ಪ್ರಯೋಗವಾಗಿದೆ. ಪರಿಹಾರ ಮಾಡದಿದ್ದರೆ ನಿಮ್ಮ ಪತಿಯ ಜೀವಕ್ಕೆ ಅಪಾಯವಿದೆ ಎಂದು ಹೆದರಿಕೆ ಹುಟ್ಟಿಸಿದ್ದ. ಜ್ಯೋತಿಷಿ ಮಾತಿನಿಂದ ಮಹಿಳೆ ಹೆದರಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೂಜೆಯ ನೆಪದಲ್ಲಿ ಇಬ್ಬರೂ ಹಂತ, ಹಂತವಾಗಿ ಸಾಕಷ್ಟು ಪ್ರಮಾಣದಲ್ಲಿ ಹಣ ವಸೂಲಿ ಮಾಡಿದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.