ಭಾರತ, ಏಪ್ರಿಲ್ 7 -- ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ತಲಾ 2 ರೂಪಾಯಿ ಹೆಚ್ಚಿಸಿದೆ. ಇದರೊಂದಿಗೆ ಭಾರತದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಮನಾರ್ಹವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. ಬೆಲೆ ಏರಿಕೆಯು ನಾಳೆ, ಅಂದರೆ ಏಪ್ರಿಲ್ 8ರಿಂದ ಜಾರಿಗೆ ಬರಲಿದೆ ಎಂದು ಸಚಿವಾಲಯ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಅಬಕಾರಿ ಸುಂಕ ಹೆಚ್ಚಿಸಿರುವ ಬಗ್ಗೆ ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ.

ಜಾಗತಿಕ ಮಟ್ಟದಲ್ಲಿ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತಿರುವ ಸಮಯದಲ್ಲಿ ಭಾರತದಲ್ಲೂ ಈ ನಿರ್ಧಾರ ಹೊರಬಂದಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 13 ರೂ.ಗೆ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ.ಗೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಬಕಾರಿ ಸುಂಕ ಹೆಚ್ಚಳ ಬೆನ್ನಲ್ಲೇ, ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದರಿಂದ ಗ್ರಾಹಕರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸೋಮವಾರ ...