Bengaluru, ಮಾರ್ಚ್ 26 -- ಬೆಂಗಳೂರು: ಅಸಲಿ ಮಚ್ಚು ಹಿಡಿದು ರೀಲ್ಸ್ ಮಾಡಿ, ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದ ಬಿಗ್ ಬಾಸ್ ಕನ್ನಡ ಸೀಸನ್ 10 ಮತ್ತು 11ರ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್‌ಗೆ, ಮುಂದಿನ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರು ನಗರ 24ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ಕೈಯಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದಲ್ಲದೆ, ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರಿಂದ, ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಅದರಂತೆ, ಸೋಮವಾರ ವಿಚಾರಣೆಯನ್ನೂ ನಡೆಸಲಾಗಿತ್ತು. ಅಚ್ಚರಿಯ ಬೆಳವಣಿಗೆಯಲ್ಲಿ ಮಂಗಳವಾರ ಬಂಧಿಸಿ ಇಂದು (ಮಾ. 26) ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
ಇದೀಗ ಪ್ರಕರಣದ ಕುರಿತಂತೆ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರಿಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಈ ಆದೇಶಕ್ಕೂ ಮುನ್ನ ರೀಲ್ಸ್ ಮಾಡಿದ್ದ ಬೆಂಗಳೂರಿನ ನಾಗರಬಾವಿಯಲ್ಲಿನ ಅಕ್ಷಯ್ ಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.