Bengaluru, ಏಪ್ರಿಲ್ 10 -- ಮಂಗಳೂರು: ಬೇಸಿಗೆಯ ಧಗೆಗೆ ಕಲ್ಲಂಗಡಿ ಹಣ್ಣು ಸಿಕ್ಕಿದರೆ ದೇಹಕ್ಕೆ ಮುದ ನೀಡುತ್ತದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಪೊಳಲಿ ಜಾತ್ರೆಯಲ್ಲಿ ಕಲ್ಲಂಗಡಿ ಹಣ್ಣನ್ನು ಪ್ರಸಾದವಾಗಿ ಹಂಚುವ ಸಂಪ್ರದಾಯವಿದೆ. ಇದಕ್ಕೆ ವಿಶೇಷವಾದ ಮಹತ್ವವಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ಪುರಾತನ ದೇವಸ್ಥಾನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವಕ್ಕೆ ಕಲ್ಲಂಗಡಿ ಹಣ್ಣೇ ಪ್ರಸಾದವೆಂಬ ನಂಬಿಕೆ ಇದೆ. ಮಾರ್ಚ್ ನಿಂದ ಎಪ್ರಿಲ್ ವರೆಗೆ ನಡೆಯುವ ಒಂದು ತಿಂಗಳ ಜಾತ್ರೆಯ ವೇಳೆ ಸಂತೆಯಲ್ಲಿ ಕಲ್ಲಂಗಡಿ ಹಣ್ಣಿನದ್ದೇ ಭರ್ಜರಿ ವ್ಯಾಪಾರ. ದೇವಸ್ಥಾನಕ್ಕೆ ಬರುವ ಭಕ್ತರು ಇಲ್ಲಿ ಕಲ್ಲಂಗಡಿ ಹಣ್ಣನ್ನು ಎಷ್ಟು ಹಣಕೊಟ್ಟಾದರೂ ಖರೀದಿಸುತ್ತಾರೆ.

ಇಲ್ಲಿನ ಕಲ್ಲಂಗಡಿ ಹಣ್ಣನ್ನು ಪುರಾಣದ ರಕ್ತಬೀಜಾಸುರನೆಂದೇ ನಂಬಲಾಗುತ್ತದೆ. ಅದರೊಳಗಿನ ಕೆಂಪು ತಿರುಳು ರಾಕ್ಷಸನ ರಕ್ತವನ್ನು ಸಂಕೇತಿಸಿದರೆ, ಅದರೊಳಗಿನ ಬೀಜಗಳು ಬೀಜಾಸುರಾದಿಗಳನ್ನು ಸಂಕೇತಿಸುತ್ತದೆ. ಪೊಳಲಿ ವ್ಯಾಪ್ತಿಯ 1...