ಭಾರತ, ಏಪ್ರಿಲ್ 7 -- ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಯಂತಹ ಅನಪೇಕ್ಷಿತ ಪ್ರಕರಣದಲ್ಲಿ ಸಿಲುಕಿ ಹಾಕಿಕೊಳ್ಳುವುದಕ್ಕೂ ಮುನ್ನ ತಮ್ಮ ವರ್ತನೆ ಕುರಿತು ಅರಿವಿರಬೇಕಿತ್ತು ಎಂದು ಹೈಕೋರ್ಟ್‌, ಪ್ರಕರಣದ ಆರೋಪಿಯಾಗಿರುವ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ನಿರೀಕ್ಷಣಾ ಜಾಮೀನಿನ ಷರತ್ತುಗಳ ಸಡಿಲಿಕೆ ಮತ್ತು ಕೆಲವು ಕಾನೂನು ಅಂಶಗಳ ಸ್ಪಷ್ಟನೆ ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರ್‌ ಅವರು ವಿಚಾರಣೆ ನಡೆಸಿದರು.

ಯಡಿಯೂರಪ್ಪ ಅವರು ಒಬ್ಬ ಹಿರಿಯ ರಾಜಕಾರಣಿಯಾಗಿದ್ದು, ಕರ್ತವ್ಯಗಳ ಹಿನ್ನೆಲೆಯಲ್ಲಿ ಅವರು ಪದೇ ಪದೇ ರಾಜ್ಯ ಮತ್ತು ದೇಶಾದ್ಯಂತ ಪ್ರವಾಸ ಕೈಗೊಳ್ಳುವ ಅನಿವಾರ್ಯತೆ ಇರುತ್ತದೆ. ಆದ್ದರಿಂದ ಪ್ರತಿ ಬಾರಿಯೂ ಅನುಮತಿ ಕೋರಿ ವಿಚಾರಣಾ ನ...