Bengaluru, ಫೆಬ್ರವರಿ 12 -- Kannappa Movie Shiva Shiva Shankara Song: ಟಾಲಿವುಡ್‌ ನಟ ಮೋಹನ್‌ ಬಾಬು ನಿರ್ಮಾಣ ಮಾಡಿರುವ ಬಹುನಿರೀಕ್ಷಿತ ಕಣ್ಣಪ್ಪ ಸಿನಿಮಾ ಬಿಡುಗಡೆಯ ಸನಿಹದಲ್ಲಿದೆ. ಬಹುಕೋಟಿ ವೆಚ್ಚದಲ್ಲಿ ಮೂಡಿಬಂದಿರುವ ಈ ಸಿನಿಮಾ ಈಗಾಗಲೇ ಬಹುತಾರಾಗಣದ ಮೂಲಕವೇ ಎಲ್ಲರ ನಿರೀಕ್ಷೆ ಹೆಚ್ಚಿಸಿದೆ. ಅದರಂತೆ ಟೀಸರ್‌ ಮತ್ತು ಪೋಸ್ಟರ್‌ ಮೂಲಕವೂ ಗಮನ ಸೆಳೆದಿದೆ. ಇದೀಗ ಇದೇ ಚಿತ್ರದ "ಶಿವ ಶಿವ ಶಂಕರ" ಎಂಬ ಹಾಡು ಬಿಡುಗಡೆ ಆಗಿದೆ. ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ್ ಗುರೂಜಿ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

ನನಗೆ "ಕಣ್ಣಪ್ಪ ಅಂದಕೂಡಲೆ ನೆನಪಿಗೆ ಬರುವುದು ಡಾ. ರಾಜಕುಮಾರ್ ಅವರು ಎಂದು ಮಾತು ಆರಂಭಿಸಿದ ನಟ, ನಿರ್ಮಾಪಕ ಮೋಹನ್ ಬಾಬು, "ಇಂದು ಶ್ರೀರವಿಶಂಕರ್ ಗುರೂಜಿ ಅವರು ನನ್ನ ಮಗ ವಿಷ್ಣು ಮಂಚು ಅಭಿನಯದ ಕಣ್ಣಪ್ಪ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಆಶೀರ್ವದಿಸಿದ್ದಾರೆ. ಅವರಿಗೆ ಅನಂತ ಧನ್ಯವಾದ. ಇನ್ನು, ನನ್ನ ಆತ್ಮೀಯ ಗೆಳೆಯರಾದ ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರ ಪ...