Mangalore, ಮೇ 17 -- ಮಂಗಳೂರು: ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು. ದೇಶದಲ್ಲಿ ಅನೇಕ ಸೂಫಿ, ಸಾಧು, ಸಂತರು, ಸಾಮಾಜಿಕ ಹರಿಕಾರರು ಬಂದು ಹೋಗಿದ್ದಾರೆ. ಇವರೆಲ್ಲರೂ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು. ಆದ್ದರಿಂದ ನಾವು ಮಾನವೀಯ ನೆಲೆಯಲ್ಲಿ ಸಮಾಜವನ್ನು ಬೆಸೆಯಬೇಕು. ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಮನುಷ್ಯರು ಮನುಷ್ಯರನ್ನು ಪ್ರೀತಿಸುವ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು‌. ಈ ಸಮಾಜವನ್ನು ನಾವು ಇನ್ನಷ್ಟು ಗಟ್ಟಿಗೊಳಿಸೋಣ. ಜೊತೆಗೆ ಅಸಮಾನತೆಯ ಸಮಾಜವನ್ನು ಸುಧಾರಿಸಿ ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಸಮಾಜ ಕಟ್ಟೋಣ. ಇದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಮನವಿ.

ಮಂಗಳೂರು ಹೊರ ವಲಯದ ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಉರುಸ್ ಮಹೋತ್ಸವದಲ್ಲಿ ಮಾತನಾಡಿದರು.

ಉಳ್ಳಾಲ ದರ್ಗಾಕ್ಕೆ ಜಾತಿ, ಧರ್ಮದ ಮಿತಿ ಇಲ್ಲ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ದರ್ಗಾ. ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾ...