Delhi, ಮೇ 6 -- ದೆಹಲಿ: ಹಾಸನದಲ್ಲಿ ನಡೆದಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ದದ ಲೈಂಗಿಕ ದೌರ್ಜನ್ಯ ಪ್ರಕರಣ, ಈ ಕುರಿತು ಪ್ರಧಾನಿ ಮಾತನಾಡಬೇಕು ಎಂದು ಕರ್ನಾಟಕ ಕಾಂಗ್ರೆಸ್‌ ಒತ್ತಾಯಿಸಿದ ನಂತರ ಮೊದಲ ಬಾರಿ ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಜ್ವಲ್‌ ದೇಶ ಬಿಟ್ಟು ಹೋಗಲು ಕರ್ನಾಟಕ ಸರ್ಕಾರವೇ ಕಾರಣ. ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವ ಹೊಣೆಗಾರಿಕೆ ಕರ್ನಾಟಕ ಸರ್ಕಾರಕ್ಕೆ ಇರುವುವುದರಿಂದ ಅವರೇ ಅದಕ್ಕೆ ಮುಂದಾಗಬೇಕು. ಅದನ್ನು ಬಿಟ್ಟು ಕೇಂದ್ರ ಸರ್ಕಾರದ ಮೇಲೆ ದೂಷಿಸಿದರೆ ಏನು ಪ್ರಯೋಜನ. ಅದೂ ಅಲ್ಲದೇ ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣದಲ್ಲಿ ಯಾರ ಪರವೂ ಸಹನೆ ತೋರುವುದೂ ಬೇಡ ಎಂದು ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಟೈಂಸ್‌ ನೌಗೆ ನೀಡಿರುವ ಸಂದರ್ಶನದಲ್ಲಿ ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ಪ್ರಧಾನಿ ವಿಸ್ತೃತವಾಗಿಯೇ ಮಾತನಾಡಿದ್ದಾರೆ. ಇದು ಕರ್ನಾಟಕದ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಚಾರ. ಇದರಲ್ಲಿ ಕೇಂದ್ರಕ್ಕಿಂತ ರಾಜ್ಯದ ಪಾತ್ರವೇ ಅಧಿಕವಾಗಿರವ...