ಭಾರತ, ಏಪ್ರಿಲ್ 1 -- ಪ್ರಧಾನ ಮಂತ್ರಿ ಕಚೇರಿಯ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಿಧಿ ತಿವಾರಿ ಈಗ ಹೊಸ ಹುದ್ದೆಗೆ ನೇಮಕಗೊಂಡಿದ್ಧಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಕಾರ್ಯದರ್ಶಿಯಾಗಿ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನಿಧಿ ತಿವಾರಿ ಅವರಿಗೆ ಪ್ರಧಾನ ಮಂತ್ರಿಯವರ ಖಾಸಗಿ ಕಾರ್ಯದರ್ಶಿಯಾಗಿ ಬಡ್ತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಧಾನ ಮಂತ್ರಿ ಕಚೇರಿಯಲ್ಲಿ ಪ್ರಸ್ತುತ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ನಿಧಿ ತಿವಾರಿ, ಐಎಫ್‌ಎಸ್ (2014) ಅವರನ್ನು ಪ್ರಧಾನ ಮಂತ್ರಿಯವರ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಕುರಿತು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಮಾರ್ಚ್ 29 ರಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ.
ಇದನ್ನೂ ಓದಿ: ಸಿಎಂ ಕುಟುಂಬ ನಿವೇಶನ ವಿವಾದ ನಂತರ ಎಚ್ಚೆತ್ತ ಮೈಸೂರು ಮುಡಾ; ಪಂಚತಾರಾ ಹೊಟೇಲ್, ಶಾಪಿಂಗ್ ಕಾಂಪ್ಲೆಕ್ಸ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.