ಭಾರತ, ಏಪ್ರಿಲ್ 1 -- ಪ್ರಧಾನ ಮಂತ್ರಿ ಕಚೇರಿಯ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಿಧಿ ತಿವಾರಿ ಈಗ ಹೊಸ ಹುದ್ದೆಗೆ ನೇಮಕಗೊಂಡಿದ್ಧಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನಿಧಿ ತಿವಾರಿ ಅವರಿಗೆ ಪ್ರಧಾನ ಮಂತ್ರಿಯವರ ಖಾಸಗಿ ಕಾರ್ಯದರ್ಶಿಯಾಗಿ ಬಡ್ತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಧಾನ ಮಂತ್ರಿ ಕಚೇರಿಯಲ್ಲಿ ಪ್ರಸ್ತುತ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ನಿಧಿ ತಿವಾರಿ, ಐಎಫ್‌ಎಸ್ (2014) ಅವರನ್ನು ಪ್ರಧಾನ ಮಂತ್ರಿಯವರ ಖಾಸಗಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಕುರಿತು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಮಾರ್ಚ್ 29 ರಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ.

ಇದನ್ನೂ ಓದಿ: ಸಿಎಂ ಕುಟುಂಬ ನಿವೇಶನ ವಿವಾದ ನಂತರ ಎಚ್ಚೆತ್ತ ಮೈಸೂರು ಮುಡಾ; ಪಂಚತಾರಾ ಹೊಟೇಲ್‌, ಶಾಪಿಂಗ್‌ ಕಾಂಪ್ಲೆಕ್ಸ...