Bangalore, ಮೇ 25 -- ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿರುವ ಹಾಗೆ ಕರ್ನಾಟಕದ ಬಿಜೆಪಿಯಲ್ಲಿ ಮೇಲ್ವರ್ಗಗಳಿಗೆ ಸೇರಿದ ನಾಯಕರ ಕೊರತೆ ಎದುರಿಸುತ್ತಿದೆ. ಈ ಕೊರತೆಯನ್ನು ನೀಗಿಸಲು ಪ್ರಾತಿನಿಧ್ಯ ಹೊಂದಿಲ್ಲದ ಸಮುದಾಯಗಳ ಯುವಕರನ್ನು ಪಕ್ಷದತ್ತ ಸೆಳೆಯಲು ಮುಂದಾಗಿದೆ. ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಈ ಸಮುದಾಯಗಳಿಗೆ ಆದ್ಯತೆ ನೀಡಲೂ ನಿರ್ಧರಿಸಿದೆ. ಕೇವಲ ಸ್ಥಳೀಯ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಮಾತ್ರವಲ್ಲ, ಮುಂಬರುವ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಯಕರನ್ನು ಹುಟ್ಟು ಹಾಕಲು ನಿರ್ಧರಿಸಿದೆ. ಬಿಜೆಪಿ ಮೈಸೂರು ಚಲೋ ಮತ್ತು ಜನಾಕ್ರೋಶ ಯಾತ್ರೆಗಳನ್ನು ನಡೆಸಿದೆಯಾದರೂ ಕಾಂಗ್ರೆಸ್ ನ ಪ್ರಮುಖ ನಾಯಕರಿಗೆ ಪರ್ಯಾಯ ನಾಯಕರಿಲ್ಲದಿರುವ ಕೊರತೆಯನ್ನು ಕಂಡುಕೊಂಡಿದೆ. ಕುರುಬ ಮತ್ತು ಅಹಿಂದ ವರ್ಗಗಳ ಮೇಲೆ ಹಿಡಿತ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಕ್ಕಲಿಗ ಸಮುದಾಯದ ಮೇಲೆ ಹಿಡಿತ ಹೊಂದಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಪರಿಶಿಷ್ಟ ಜಾತಿಯ ಮೇಲೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.