ಭಾರತ, ಫೆಬ್ರವರಿ 24 -- ಬೆಳಗಾವಿ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿರುವ ಮಹಾ ಕುಂಭಮೇಳಕ್ಕೆಂದು ಬೆಳಗಾವಿಯ ಗೋಕಾಕ್‌ನಿಂದ ತೆರಳಿ ಪುಣ್ಯಸ್ನಾನವನ್ನು ಮುಗಿಸಿಕೊಂಡು ವಾಪಾಸಾಗುತ್ತಿದ್ದ ಭಕ್ತರ ವಾಹನವು ಬಸ್‌ಗೆ ಡಿಕ್ಕಿ ಹೊಡೆದು ಆರು ಮಂದಿ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಮೃತಪಟ್ಟವರನ್ನು ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಎಂದು ಗುರುತಿಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಜಬಲ್ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಪ್ರದೇಶದ ಜಬಲ್ಪುರನ ಖಿತೌಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ಬೆಳಗಿನ ಜಾವ 5 ಗಂಟೆಗೆ ನಡೆದಿದೆ. ಕೆಎ 49 ಎಂ 5054 ಸಂಖ್ಯೆಯ ತೂಫಾನ್ ವಾಹನದಲ್ಲಿ ಒಟ್ಟು 8 ಜನ ಪ್ರಯಾಣ ಬೆಳೆಸಿದ್ದರು. ಇವರ ಪೈಕಿ ಆರು ಜನ ಮೃತಪಟ...