ಭಾರತ, ಏಪ್ರಿಲ್ 16 -- ಮಂಗಳೂರು: 2022ರಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇನ್ನೂ ನಾಲ್ವರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಈ ಪಟ್ಟಿಯಲ್ಲಿರುವ ಮೂವರು ತಲೆಮರೆಸಿಕೊಂಡಿದ್ದಾರೆ.

ಎರಡನೇ ಪೂರಕ ಆರೋಪಪಟ್ಟಿಯಲ್ಲಿ, ಎನ್‌ಐಎ ಅಬ್ದುಲ್ ನಾಸಿರ್, ನೌಶಾದ್, ಅಬ್ದುಲ್ ರೆಹಮಾನ್ ಮತ್ತು ಅತೀಕ್ ಅಹ್ಮದ್ ವಿರುದ್ಧ ಐಪಿಸಿ ಮತ್ತು ಯುಎ (ಪಿ) ಕಾಯ್ದೆ, 1967 ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪ ಹೊರಿಸಿದ್ದು, ಪ್ರಕರಣದಲ್ಲಿ ಒಟ್ಟು ಆರೋಪಪಟ್ಟಿ ಸಲ್ಲಿಸಲಾದ ಆರೋಪಿಗಳ ಸಂಖ್ಯೆ 27 ಕ್ಕೆ ತಲುಪಿದೆ. ಇದರಲ್ಲಿ ಆರು ಮಂದಿ ತಲೆಮರೆಸಿಕೊಂಡಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಆರೋಪಿಗಳ ಪಟ್ಟಿ ಸಲ್ಲಿಸಲಾದ ನಾಲ್ವರಲ್ಲಿ ಮೂವರು ಪರಾರಿಯಾಗಿದ್ದಾರೆ. ಅವರನ್ನು ಅಬ್ದುಲ್ ನಾಸಿರ್, ನೌಶಾದ್ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಬಂದರು ನಿರ್ಮಾಣದಿಂದ ಮೀನುಗಾರರು ನೆಲೆ ಕಳೆದುಕ...