ಭಾರತ, ಜೂನ್ 4 -- ಐಪಿಎಲ್ 2025ರಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ ಗುಜರಾತ್ ಟೈಟಾನ್ಸ್​​ ತಂಡದ ಸಾಯಿ ಸುದರ್ಶನ್ ಆರೆಂಜ್ ಕ್ಯಾಪ್ ಗೆದ್ದುಕೊಂಡಿದ್ದಾರೆ. 15 ಇನ್ನಿಂಗ್ಸ್​​ಗಳಲ್ಲಿ 54.21ರ ಬ್ಯಾಟಿಂಗ್ ಸರಾಸರಿಯಲ್ಲಿ 1 ಶತಕ ಮತ್ತು 6 ಅರ್ಧಶತಕ ಸಹಿತ ಒಟ್ಟು 759 ರನ್ ಗಳಿಸಿದ್ದಾರೆ. ಔಟಾಗದೆ 108 ರನ್ ಗಳಿಸಿದ್ದು ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ. 88 ಬೌಂಡರಿ ಮತ್ತು 21 ಸಿಕ್ಸರ್​​ಗಳನ್ನೂ ಬಾರಿಸಿ ಗಮನ ಸೆಳೆದಿದ್ದಾರೆ.

ಮುಂಬೈ ಇಂಡಿಯನ್ಸ್​​ನ ಸೂರ್ಯಕುಮಾರ್ ಯಾದವ್ ಐಪಿಎಲ್ 2025ರಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ಆಡಿದ 16 ಇನ್ನಿಂಗ್ಸ್​​ಗಳಲ್ಲಿ 65.18 ಸರಾಸರಿಯಲ್ಲಿ 5 ಅರ್ಧಶತಕ ಸಹಿತ 717 ರನ್ ಗಳಿಸಿದರು. ಅವರ ಗರಿಷ್ಠ ವೈಯಕ್ತಿಕ ಇನ್ನಿಂಗ್ಸ್ ಔಟಾಗದೆ 73 ರನ್ ಆಗಿದೆ. 69 ಬೌಂಡರಿ, 38 ಸಿಕ್ಸರ್ ಸಿಡಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್ 2025ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್​​ಮನ್​ಗಳ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. 15...