ಭಾರತ, ಏಪ್ರಿಲ್ 2 -- ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಮಂಗಳವಾರ (ಮಾ.1) ನಡೆದ ಐಪಿಎಲ್‌ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾದವು. ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಎಲ್‌ಎಸ್‌ಜಿ ಬೌಲರ್ ದಿಗ್ವೇಶ್ ಸಿಂಗ್ ರಾಠಿ ವಿರುದ್ಧ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಕಠಿಣ ಕ್ರಮ ಕೈಗೊಂಡಿದೆ. ಪಿಬಿಕೆಎಸ್ ತಂಡದ ಯುವ ಬ್ಯಾಟರ್ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿದ ನಂತರ‌, ವಿಭಿನ್ನ ರೀತಿಯಲ್ಲಿ ನೋಟ್‌ಬುಕ್‌ನಲ್ಲಿ ಬರೆದಂತೆ ಸಂಭ್ರಮಾಚರಣೆ ಮಾಡಿದ ದಿಗ್ವೇಶ್‌ಗೆ ಪಂದ್ಯದ ಶುಲ್ಕದ ಶೇಕಡಾ 25 ರಷ್ಟು ದಂಡ ಮತ್ತು ಒಂದು ಡಿಮೆರಿಟ್ ಪಾಯಿಂಟ್ ವಿಧಿಸಲಾಗಿದೆ.

"ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಂಗಳವಾರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್‌ ಬೌಲರ್ ದಿಗ್ವೇಶ್ ಸಿಂಗ್ ಅವರಿಗೆ ಪಂದ್ಯದ ಶುಲ್ಕದ ಶೇಕಡ...