ಭಾರತ, ಮಾರ್ಚ್ 2 -- ಡೆಲ್ಲಿ ಕ್ಯಾಪಿಟಲ್ಸ್ (DC) 2025ರ ಮಹಿಳಾ ಪ್ರೀಮಿಯರ್ ಲೀಗ್ (WPL 2025) ಪ್ಲೇಆಫ್ ತಲುಪಿದ ಮೊದಲ ತಂಡವಾಗಿದೆ. ಶನಿವಾರ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡಿಸಿ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿತು. ಶೆಫಾಲಿ ವರ್ಮಾ (80*) ಮತ್ತು ಜೆಸ್ ಜೊನಾಸನ್ (60*) ಅವರ 146* ರನ್‌ಗಳ ಅಬ್ಬರದ ಜೊತೆಯಾಟದ ನೆರವಿನಿಂದ ಕ್ಯಾಪಿಟಲ್ಸ್ ಭರ್ಜರಿ ಗೆಲುವು ದಾಖಲಿಸಿತು. ಆದರೆ ಆರ್​ಸಿಬಿ, ಪ್ಲೇಆಫ್ ಪ್ರವೇಶಿಸಲು ಉಳಿದ 2 ಪಂದ್ಯಗಳಲ್ಲೂ ಜಯಿಸುವುದು ಅಗತ್ಯ.

14ನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ, ಹಾಲಿ ಚಾಂಪಿಯನ್‌ ಆರ್​ಸಿಬಿ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಎಲ್ಲಿಸ್ ಪೆರಿ ಅವರ ಅರ್ಧಶತಕದ ನೆರವಿನಿಂದ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 147 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಡೆಲ್ಲಿ ತಂಡ 15.3 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿ 27 ಎಸೆತಗಳು ಬಾಕಿ ಇರು...