ಭಾರತ, ಮೇ 7 -- 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್ ಸನಿಹಕ್ಕೆ ಬಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಆಘಾತವಾಗಿದೆ. ಇಂಪ್ಯಾಕ್ಟ್ ಪ್ಲೇಯರ್​ ಆಗಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಂತ ಸ್ಥಿರ ಪ್ರದರ್ಶನ ನೀಡುತ್ತಿದ್ದ ಕನ್ನಡಿಗ ಹಾಗೂ ಎಡಗೈ ಬ್ಯಾಟರ್​ ದೇವದತ್ ಪಡಿಕ್ಕಲ್ ಅವರು ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಪಡಿಕ್ಕಲ್ ಬದಲಿಗೆ ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್ವಾಲ್ ಆರ್​ಸಿಬಿ ಸೇರಿದ್ದಾರೆ.

ಪ್ರಸಕ್ತ ಆವೃತ್ತಿಯಲ್ಲಿ ಆರ್‌ಸಿಬಿ ಪರ 10 ಪಂದ್ಯಗಳನ್ನು ಆಡಿರುವ ಪಡಿಕ್ಕಲ್, ಭರ್ಜರಿ 2 ಅರ್ಧಶತಕಗಳ ಸಹಾಯದಿಂದ 247 ರನ್ ಗಳಿಸಿದ್ದರು. ಆದರೆ ಪಡಿಕ್ಕಲ್ ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿರುವ ಹಿನ್ನೆಲೆ ತಂಡದಿಂದ ಹೊರಬಿದ್ದಿದ್ದಾರೆ. ಅಲ್ಲದೆ, ಅವರನ್ನು ಕಳೆದುಕೊಂಡಿರುವ ಆರ್​ಸಿಬಿಗೂ ನಷ್ಟವಾಗಿದೆ. ಅಗರ್ವಾಲ್ ಈವರೆಗೆ 127 ಐಪಿಎಲ್ ಪಂದ್ಯಗಳನ್ನು ಆಡಿದ್ದು, 2661 ರನ್ ಗಳಿಸಿದ್ದಾರೆ. ಶತಕ ಮತ್ತು 13 ಅರ್ಧಶತಕ ಸಿಡಿಸಿದ್ದು, 1 ಕೋಟಿ ರೂ.ಗೆ ಆರ್‌ಸಿ...