ಭಾರತ, ಮಾರ್ಚ್ 8 -- ಮಂಗಳೂರು: ಸುಮಾರು 10 ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಫರಂಗಿಪೇಟಿಯ ಕಿದೆಬೆಟ್ಟು ನಿವಾಸಿ ದಿಗಂತ್‌ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಪಿಯುಸಿ ವ್ಯಾಸಂಗ ಮಾಡುತ್ತಿದ್ದ ದಿಗಂತ್‌ ನಾಪತ್ತೆಯಾಗಿ ಇಂದಿಗೆ ಹನ್ನೊಂದು ದಿನಗಳು ಕಳೆದು ಹನ್ನೆರಡನೇ ದಿನ. ಇದೀಗ ಉಡುಪಿಯಲ್ಲಿ ಪತ್ತೆಯಾಗಿರುವ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರೀಗ ಫರಂಗಿಪೇಟೆಗೆ ಕರೆದುಕೊಂಡುಬರುತ್ತಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರು ಇನ್ನೂ ಈ ವಿಚಾರ ಖಚಿತಪಡಿಸಿಲ್ಲ.

ಉಡುಪಿಯ ಡಿಮಾರ್ಟ್‌ ಬಳಿ ದಿಗಂತ್‌ ಪತ್ತೆಯಾಗಿದ್ದು, ತನ್ನನ್ನು ಯಾರೋ ಕರೆದುಕೊಂಡು ಹೋಗಿದ್ದಾಗಿ ಹೇಳಿರುವ ಬಗ್ಗೆ ದೃಶ್ಯ ಮಾಧ್ಯಮಗಳು ವರದಿ ಮಾಡಿವೆ.

ಫೆ.25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿತ್ತು. ಫರಂಗಿಪೇಟೆಯಲ್ಲಿ ಪ್ರತಿಭಟನೆ ನಡೆದು ಪೊಲೀಸರ ತನಿಖೆ ಸರಿಯಾಗಿಲ್ಲ ಎ...