ಭಾರತ, ಏಪ್ರಿಲ್ 13 -- ತವರಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಸತತ ಎರಡನೇ ಸೋಲಿಗೆ ಶರಣಾಗಿದ್ದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತವರಿನ ಹೊರಗೆ ನಡೆದ ಸತತ 4ನೇ ಪಂದ್ಯದಲ್ಲಿ ಗೆದ್ದು ಬೀಗಿದೆ. ಫಿಲ್ ಸಾಲ್ಟ್ ಅವರ (65) ಬಿರುಸಿನ ಅರ್ಧಶತಕದ ನೆರವಿನಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ 9 ವಿಕೆಟ್​ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಅಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಮತ್ತೊಂದೆಡೆ ರಾಜಸ್ಥಾನ್​ಗೆ ಒಟ್ಟಾರೆ 4ನೇ ಸೋಲು ಇದಾಗಿದ್ದು, ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲೇ ಮುಂದುವರೆದಿದೆ.

ಜೈಪುರದ ಸವಾಯಿ ಮಾನ್​ಸಿಂಗ್ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್​ನ 28ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಆರ್, ಯಶಸ್ವಿ ಜೈಸ್ವಾಲ್ ಅವರ (75) ಆಕರ್ಷಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್​​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ, 17.3 ಓವರ್​​ಗಳಲ್ಲೇ 1 ವಿಕೆಟ್ ಕಳೆದುಕೊಂಡು 175 ರನ್ ಗಳಿಸಿ ಗೆಲುವಿನ ಕೇಕೆ ಹಾಕಿತು. ...