ಭಾರತ, ಫೆಬ್ರವರಿ 3 -- ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 13ರಂದು ಯುಎಸ್ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ ವಾರ ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಗೆ ತೆರಳಲಿರುವ ಪ್ರಧಾನಿ,‌ ಇತ್ತೀಚೆಗೆ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದು ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಟ್ರಂಪ್‌ ಅವರನ್ನು ಭೇಟಿ ಮಾಡಲಿದ್ದಾರೆ. ಭೇಟಿಯ ಸಮಯದಲ್ಲಿ ಮೋದಿಗೆ ಟ್ರಂಪ್ ಔತಣಕೂಟವನ್ನು ಆಯೋಜಿಸುವ ಸಾಧ್ಯತೆಯಿದೆ.

ಫ್ರಾನ್ಸ್ ಪ್ರವಾಸ ಕೈಗೊಳ್ಳಲಿರುವ ನರೇಂದ್ರ ಮೋದಿ, ಅಲ್ಲಿಂದ ಫೆಬ್ರುವರಿ 12ರ ಸಂಜೆ ವಾಷಿಂಗ್ಟನ್ ಡಿಸಿಗೆ ಆಗಮಿಸುವ ನಿರೀಕ್ಷೆಯಿದೆ. ಫೆಬ್ರುವರಿ 14ರವರೆಗೆ ಯುಎಸ್ ರಾಜಧಾನಿಯಲ್ಲಿ ಉಳಿಯಲಿದ್ದಾರೆ. ಅಮೆರಿಕದ ಕಾರ್ಪೊರೇಟ್ ನಾಯಕರು ಮತ್ತು ಸಮುದಾಯದೊಂದಿಗೆ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.

ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ನರೇಂದ್ರ ಮೋದಿಯೊಂದಿಗೆ ಟ್ರಂಪ್...