ಭಾರತ, ಜೂನ್ 3 -- ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಮೇ. 27ರಂದು ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಸೆರೆಹಿಡಿದಿರುವುದಾಗಿ ಪೊಲೀಸರು ತಿಳಿಸಿದ್ಧಾರೆ.

ಪ್ರಕರಣದಲ್ಲಿ ಈಗಾಗಲೇ 5 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಂತೆ ಮಂಗಳವಾರ ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ(32), ಬಡಗಬೆಳ್ಳೂರು ಗ್ರಾಮದ ತೇಜಾಕ್ಷ (24) ಎಂಬಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ ತಾಲೂಕು ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಪ್ರಥ್ವೀರಾಜ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಚಿಂತನ್ (19) ಅವರನ್ನು ತನಿಖಾ ತಂಡ ಮೇ 29ರಂದು ಬಂಟ್ವಾಳ ಕಳ್ಳಿಗೆ ಗ್ರಾಮದ ...