Bengaluru, ಜೂನ್ 19 -- ಮಂಗಳೂರು: ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಸಮೀಪ ಕಿಲ್ತೋಡಿ ಎಂಬಲ್ಲಿ ಮನೆಯೊಂದರಲ್ಲಿ ಸಜೀಪದ ತಿಮ್ಮಪ್ಪ ಮೂಲ್ಯ (52) ಹಾಗೂ ಅವರ ಗರ್ಭಿಣಿ ಪತ್ನಿ ಜಯಂತಿ (45) ಎಂಬಿಬ್ಬರ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಯಾವುದೋ ವಿಷಯಕ್ಕೆ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಮೃತರ ಸಂಬಂಧಿಗಳ ದೂರಿನಂತೆ ಪ್ರಕರಣ ದಾಖಲಾಗಿದೆ.

ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಇದ್ದರೆ, ತಿಮ್ಮಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸಮೀಪದವರು ಬೆಳಗ್ಗೆಯಾದರೂ ಬಾಗಿಲು ತೆರೆಯಲಿಲ್ಲವೇಕೆ ಎಂದು ಸಂಶಯದಿಂದ ಗಮನಿಸಿದಾಗ ವಿಷಯ ಗೊತ್ತಾಗಿದ್ದು, ಕೂಡಲೇ ಪೊಲೀಸರ ಗಮನಕ್ಕೆ ತಂದರು.

ಜಯಂತಿ ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದು, ಜುಲೈ 2ರಂದು ಸೀಮಂತ ನಡೆಸುವುದು ಎಂದು ದಿನ ನಿಗದಿಯಾಗಿತ್ತು. ಈ ನಡುವೆ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಕುಟಂಬ ವರ್ಗವನ್ನು ದುಃಖದ ಮಡುವಿನಲ್ಲಿರುವಂತೆ ಮಾಡಿದೆ. ತಿಮ್ಮಪ್ಪ ಮೂಲ್ಯ ಅವರು ಸಜೀಪದಲ್ಲಿ ಅಂ...