ಭಾರತ, ಮೇ 28 -- ಮಂಗಳೂರು: ಬಂಟ್ವಾಳ ತಾಲೂಕು ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಟೆಂಪೊ ಚಾಲಕ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಅಂತಿಮ ವಿಧಿ ವಿಧಾನಗಳು ಬುಧವಾರ ಕೊಳತ್ತಮಜಲು ಮಸೀದಿಯಲ್ಲಿ ನಡೆಯಿತು. ಈ ವೇಳೆ ಸಾವಿರಾರು ಮಂದಿ ಭಾಗವಹಿಸಿದ್ದರು. ಇದಕ್ಕೂ ಮೊದಲು ಅವರ ಪಾರ್ಥಿವ ಶರೀರವನ್ನು ಕರೆತರುವ ವೇಳೆ ಫರಂಗಿಪೇಟೆ, ತುಂಬೆ, ಬಿ.ಸಿ.ರೋಡ್ ನ ಕೈಕಂಬ ಪ್ರದೇಶಗಳಲ್ಲಿ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಲಾಯಿತು.
ಸ್ಥಳಕ್ಕೆ ರಾಜ್ಯ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಪ್ರಸಾದ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂಡಗಳಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ಈ ಕೇಸ್ ಸಂಬಂಧ 15 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಕರಣದಲ್ಲಿ ಯಾರ್ಯಾರಿದ್ದಾರೆ ಅವರನ್ನು ಪತ್ತೆಹಚ್ಚಲು ತಂಡಗಳನ್ನು ರಚಿಸಲಾಗಿದೆ. ಶೀಘ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.