ಭಾರತ, ಮೇ 30 -- ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ. 27ರಂದು ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ಪ್ರಕಟಣೆ ಹೊರಡಿಸಿದ್ದು, ಬಂಟ್ವಾಳ ತಾಲೂಕು ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಪ್ರಥ್ವೀರಾಜ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಚಿಂತನ್ (19) ಅವರು ವಶಕ್ಕೆ ಪಡೆಯಲಾಗಿರುವ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ಅವರು ತನಿಖಾಧಿಕಾರಿಯಾಗಿದ್ದು, ಐದು ತನಿಖಾ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗಿದೆ. ತನಿಖಾ ತಂಡವು 29ರಂದು ಬಂಟ್ವಾಳ ಕಳ್ಳಿಗೆ ಗ್ರ...
Click here to read full article from source
To read the full article or to get the complete feed from this publication, please
Contact Us.