ಭಾರತ, ಏಪ್ರಿಲ್ 6 -- ಮೈಸೂರು: ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವು ವಿರೋಧಿಸಿ ಕನ್ನಡ ಚಳವಳಿ ಮುಖಂಡ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ಮಾಡಿದ್ದಾರೆ. ತೆಂಗಿನಕಾಯಿ ಈಡುಗಾಯಿ ಹೊಡೆಯುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಮೈಸೂರಿನ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ವಾಟಾಳ್ ನಾಗರಾಜ್‌ ಪ್ರತಿಭಟನೆ ಯಾವಾಗಲೂ ವಿಭಿನ್ನವಾಗಿಯೇ ಇರುತ್ತದೆ. ಈ ಬಾರಿಯೂ ಅಷ್ಟೇ ತೆಂಗಿನಕಾಯಿ ಈಡುಗಾಯಿ ಹೊಡೆಯುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ.

ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ಪ್ರಾರಂಭ ಮಾಡಲು ಹಲವು ಪ್ರಯತ್ನ ಮಾಡಲಾಗುತ್ತಿದೆ. ಇದರ ಹಿಂದೆ ಯಾರಿದ್ದಾರೆ? ಒತ್ತಡ ಹಾಕುತ್ತಿರುವವರು ಯಾರು? ಎಂಬ ಪ್ರಶ್ನೆ ಉದ್ಭವವಾಗುತ್ತಿದೆ. ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ಒತ್ತಡಕ್ಕೆ ಮಣಿದು ರಾತ್ರಿ ಸಂಚಾರ ನಿಷೇಧ ತೆರವು ಮಾಡಿದರೆ ಅಪಾಯ. ಇದರಿಂದ ಪ್ರಾಣಿ ಸಂಕುಲಕ್ಕೆ ತೊಂದರೆಯಾಗುತ್ತದೆ. ನಮ್ಮಲ್ಲಿ ಹುಲಿಗಳ ಸಂತತಿ ಕಡಿಮೆಯಾಗುತ್ತ...