ಭಾರತ, ಏಪ್ರಿಲ್ 16 -- ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದ ಪರಿಸರ ಸೂಕ್ಷ್ಮ ಕಡಲ ತೀರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಾಣಿಜ್ಯ ಬಂದರು ನಿರ್ಮಾಣ ಯೋಜನೆಯನ್ನು ಹಾಗೂ ಮೀನುಗಾರರ ವಸತಿ ನೆಲೆಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಜನವಿರೋಧಿಯಾಗಿದೆ ಎಂದು ಆರೋಪಿಸಿರುವ ಮೀನುಗಾರ ಸಂಘಟನೆಗಳು, ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದೆ. ಬಂದರು ವಿರೋಧಿ ಹೋರಾಟಗಾರರ ಮೇಲೆ ಪೊಲೀಸರು ಈವರೆಗೆ ದಾಖಲಿಸಿರುವ ಎಲ್ಲ ಪ್ರಕರಣಗಳನ್ನು ಕೈಬಿಡಲು ಸಿಎಂ ಸಿದ್ಧರಾಮಯ್ಯ ಬಳಿ ಸಂಘಟನೆ ಮನವಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಟೊಂಕದ ಉದ್ದೇಶಿತ ಖಾಸಗಿ ವಾಣಿಜ್ಯ ಬಂದರು ಸ್ಥಾಪನೆ ಮತ್ತು ಚತುಷ್ಪಥ ರಸ್ತೆ ಹಾಗೂ ರೈಲು ಮಾರ್ಗ ನಿರ್ಮಾಣ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ ರಾಷ್ಟ್ರೀಯ ಮೀನುಗಾರರ ಸಂಘಟನೆಯ ನಿಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿ, ಮನವಿಪತ್ರ ಸಲ್ಲಿಸಿದ್ದಾರೆ. ರಾಷ್ಟ್ರೀಯ ಮೀನುಗಾರರ ಸಂಘಟನೆಯ ಕರ್ನಾಟ...