Bangalore, ಫೆಬ್ರವರಿ 1 -- ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ನಲ್ಲಿ ರೈಲ್ವೆ ಇಲಾಖೆಗೆ ಹಿಂದಿನ ವರ್ಷಕ್ಕಿಂತ ಹೆಚ್ಚಿನ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಅದರಲ್ಲೂ ಕರ್ನಾಟಕಕ್ಕೂ ಅನುದಾನ ಒದಗಿಸಲಾಗಿದೆ. ಕರ್ನಾಟಕಕ್ಕೆ ರೈಲ್ವೆಗೆ 7524 ಕೋಟಿ ರೂ. ಹಂಚಿಕೆಯಾಗಿದೆ. ಇದರಲ್ಲಿ ಹೊಸ ಮಾರ್ಗಗಳು ಹಾಗೂ ಈಗಾಗಲೇ ಪ್ರಗತಿಯಲ್ಲಿರುವ ರೈಲ್ವೆ ಕಾಮಗಾರಿಗಳಿಗೆ 3817 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಕರ್ನಾಟಕದಲ್ಲಿ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಒದಗಿಸಲು 987 ಕೋಟಿ ರೂ. ಗಳನ್ನು ಮೀಸಲಿಡಲಾಗಿದೆ.

ದೆಹಲಿಯಲ್ಲಿ ಬಜೆಟ್‌ ಮಂಡನೆ ಬಳಿಕ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ವಲಯಕ್ಕೆ ಸಿಕ್ಕಿರುವ, ಅದರಲ್ಲೂ ಕರ್ನಾಟಕಕ್ಕೆ ದೊರೆತ ವಿವರಗಳನ್ನು ಒದಗಿಸಿದರು.

ಕೇಂದ್ರ ಬಜೆಟ್‌2024ರಲ್ಲಿ ರೈಲ್ವೆ ವಲಯಕ್ಕೆ ಈವರೆಗಿನ ಅತ್ಯಧಿಕ 2.52 ಲಕ್ಷ ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಅದರಲ...