ಭಾರತ, ಮಾರ್ಚ್ 7 -- Karnataka Budget 2025: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವಕಾಶ ಸಿಕ್ಕಾಗಲೆಲ್ಲಾ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ನಮ್ಮ ತೆರಿಗೆ ಪಾಲು ನಮಗೆ ಸರಿಯಾಗಿ ಕೊಡಬೇಕೆಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಗಾಗ ಕುಟುಕುತ್ತಲೇ ಇರುತ್ತಾರೆ. ಆದರೆ ಈ ಬಾರಿಯ ಬಜೆಟ್ ನಲ್ಲೂ ತೆರಿಗೆ ಸಂಬಂಧ ಕೇಂದ್ರ ಸರ್ಕಾರ ಅಸಹಕಾರವನ್ನು ಕಟುವಾಗಿ ಟೀಕಿಸಿದ್ದಾರೆ. ಬಜೆಟ್ ಮಂಡಿಸುತ್ತಿರುವಾಗಲೇ ಕೆಲವೊಂದು ಸಂದರ್ಭಗಳನ್ನು ಬಳಸಿಕೊಂಡು ಮೋದಿ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಇಂದು (ಮಾರ್ಚ್ 7, ಶುಕ್ರವಾರ) ವಿಧಾನಸಭೆಯಲ್ಲಿ ಬಜೆಟ್ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಗೆಲ್ಲಾ ಕೇಂದ್ರ ಸರ್ಕಾರವನ್ನು ಟೀಕಿಸಿದರು ಎಂಬುದನ್ನು ಇಲ್ಲಿ ನೀಡಲಾಗಿದೆ.

ಕರ್ನಾಟಕದ ಹಣಕಾಸು ಪರಿಸ್ಥಿತಿ ಬಗ್ಗೆ ವಿವರಿಸುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿರುವ ಸಿಎ...