ಭಾರತ, ಮಾರ್ಚ್ 7 -- Karnataka Budget 2025-26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, 2025-26ನೇ ಸಾಲಿನ ಆಯವ್ಯದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಬರಪೂರ ಅನುದಾನವನ್ನು ಘೋಷಿಸಿದ್ದಾರೆ. ಈ ಬಾರಿ ಬಜೆಟ್ ನಲ್ಲಿ ಅನುದಾನವನ್ನು ಹಿಂದಿನ ವರ್ಷಕ್ಕಿಂತ ದ್ವಿಗುಣಗೊಳಿಸಿದ್ದಾರೆ.

ರಾಜ್ಯದ ಆರ್ಥಿಕತೆಗೆ ಬಹುಮುಖ್ಯ ಕೊಡುಗೆ ನೀಡುತ್ತಿರವ ಬೆಂಗಳೂರು ನಗರ ಮೂಲಸೌಲಭ್ಯಗಳ ಅಭಿವೃದ್ಧಿಗೆ ಪ್ರತಿ ವರ್ಷ ನೀಡುತ್ತಿರುವ 3000 ಕೋಟಿ ರೂಪಾಯಿಗಳ ಅನುದಾನವನ್ನು ಪ್ರಸಕ್ತ ವರ್ಷದಲ್ಲಿ ಅಂದರೆ 2025-26ನೇ ಸಾಲಿನ ಆರ್ಥಿಕ ವರ್ಷಕ್ಕೆ 7000 ಕೋಟಿ ರೂಪಾಯಿಗೆ ಅನುದಾನವನ್ನು ಹೆಚ್ಚಿಸಲಾಗಿದೆ. ಈ ಅನುದಾನವನ್ನು ಬೃಹತ್ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಅನುಷ್ಠಾನಗೊಳಿಸಲು ಹೊಸದಾಗಿ ವಿಶೇಷ ಉದ್ದೇಶಿತ ಸಂಸ್ಥೆ (Special Purpose Vehicle) ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ನಗರಕ್ಕೆ ಘೋಷಣೆ ಮಾಡಿರುವ ಕೆಲವೊಂದು ಯೋಜನೆ, ಅನುದಾನಗಳ ವಿವರ...