ಭಾರತ, ಮಾರ್ಚ್ 3 -- ಬಳ್ಳಾರಿ: ಕರ್ನಾಟಕದಲ್ಲಿ ಹಕ್ಕಿ ಜ್ವರದ ಭೀತಿ ದಿನೇ ದಿನೇ ಹೆಚ್ಚುತ್ತಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗಿವೆ. ಆರಂಭದಲ್ಲಿ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಹಕ್ಕಿ ಜ್ವರದ ಭೀತಿ ಹಬ್ಬಿತ್ತು. ಬಳಿಕ ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲೂ ಹರಡುತ್ತಿದೆ. ಇದು ಕುಕ್ಕುಟೋದ್ಯಮದ ಮೇಲೂ ಪ್ರಭಾವ ಬೀರಿದೆ. ಚಿಕನ್‌ ಬೆಲೆ ಕಡಿಮೆ ಮಾಡಿದರೂ, ಖರೀದಿಸಲು ಜನರು ಹಿಂದೆ ಮುಂದೆ ನೋಡುತ್ತಿದ್ದಾರೆ. ಜನರಲ್ಲಿ ಹಕ್ಕಿ ಜ್ವರ ಹರಡುವ ಭೀತಿ ಎದುರಾಗಿದ್ದು, ಮಾಂಸ ಕೊಳ್ಳಲು ಹಿಂದೇಟು ಹಾಕಿದ್ದರೆ.

ಉತ್ತರ ಕರ್ನಾಟಕದ ಹಲವೆಡೆ ಕೋಳಿಗಳು ಸಾವನ್ನಪ್ಪುತ್ತಿವೆ. ಬಳ್ಳಾರಿ ಜಿಲ್ಲೆಗೆ ಹಕ್ಕಿ ಜ್ವರದ ಭೀತಿ ಹೆಚ್ಚು ಆವರಿಸಿದ್ದು, ಕಪ್ಪಗಲ್ಲು ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ 8000 ಕೋಳಿಗಳು ಸಾವನ್ನಪ್ಪಿವೆ. ಈ ಘಟನೆ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಕೋಳಿ ಫಾರಂಗೆ ಬಂದು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಮೂರೇ ದಿನಗಳ ಅಂತರದಲ್ಲಿ 8 ಸಾವಿರ ಕೋಳಿಗಳು...