ಭಾರತ, ಮಾರ್ಚ್ 1 -- ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದ ಬಳಿಕ ಇದೀಗ ಕರ್ನಾಟಕದಲ್ಲೂ ಹಕ್ಕಿಜ್ವರದ ಭೀತಿ ಹೆಚ್ಚಾಗಿದೆ. ಬಳ್ಳಾರಿಯಲ್ಲಿ ಹಕ್ಕಿ ಜ್ವರ ಹರಡುವ ಆತಂಕ ಸೃಷ್ಟಿಯಾಗಿದ್ದು, ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದ ಬಳಿಯ ಸರ್ಕಾರಿ ಪಾಲ್ಟ್ರಿ ಫಾರ್ಮ್‌ನಲ್ಲಿದ್ದ ಸುಮಾರು 2100 ಕೋಳಿಗಳು ಹಕ್ಕಿ ಜ್ವರ (Bird Flu) ದಿಂದ ಸಾವನ್ನಪ್ಪಿವೆ. ಫೆಬ್ರವರಿ 21ರಿಂದ ಹಂತ ಹಂತವಾಗಿ ಇಷ್ಟು ಪ್ರಮಾಣದಲ್ಲಿ ಕೋಳಿಗಳ ಮೃತಪಟ್ಟಿವೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್​ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ.

ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ಬಳ್ಳಾರಿ ಜಿಲ್ಲೆಯ ಸಂಡೂರಿಗೆ ಸಾಗಿಸಲಾಗಿದ್ದ ಕೋಳಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿವೆ ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ಈಗಾಗಲೇ ಸತ್ತ ಕೋಳಿಗಳ ಮಾದರಿ ಸಂಗ್ರಹಿಸಿ ಮಧ್ಯಪ್ರದೇಶದದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಪ್ ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷಿಸಲಾಗಿತ್ತು. ಪ್ರಯೋಗಾಲಯದ ವರದಿ ಬಂದ ಬಳಿಕ, ಕೋಳಿಗಳಲ...