ಭಾರತ, ಮಾರ್ಚ್ 27 -- ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಗಳ ಕಾರಣ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷದ ಮಟ್ಟಿಗೆ ಬಿಜೆಪಿಯಿಂದ ಉಚ್ಚಾಟಿಸಿದ ಬಳಿಕ, ಪಕ್ಷದ ರಾಜ್ಯ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಎರಡು ಟ್ವೀಟ್ ಮಾಡಿದ್ದು, ಅದರಲ್ಲಿ ಇದು ಸಂಭ್ರಮಿಸುವ ಹೊತ್ತಲ್ಲ, ಪಕ್ಷ ಸಂಘಟನೆ ಕಡೆಗೆ ಗಮನಹರಿಸೋಣ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಈ ನಡುವೆ, ವಿಜಯಪುರ ಮತ್ತು ಕೆಲವು ಕಡೆಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸಿದ ಸುದ್ದಿ ಬಹಿರಂಗವಾದ ಕೂಡಲೆ ಪಟಾಕಿ ಸಿಡಿಸಿ ಸಿಹಿ ಹಂಚಿದ ಘಟನೆಯೂ ಗಮನಸೆಳೆಯಿತು. ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರದ ಶಾಸಕ.
ಭಾರತೀಯ ಜನತಾ ಪಾರ್ಟಿ ಉದಾತ್ತ ಉದ್ದೇಶ ಹಾಗೂ ಗುರಿಯನ್ನಿಟ್ಟುಕೊಂಡು ಯೋಜಿತವಾಗಿ ಬೆಳೆದು ಕೋಟ್ಯಂತರ ಸಮರ್ಪಣಾ ಕಾರ್ಯಕರ್ತರನ್ನು ದೇಶ ಕಟ್ಟುವ ಬದ್ಧತೆಗಾಗಿ ಸಜ್ಜುಗೊಳಿಸಿದ ಪಕ್ಷ, ಅಶಿಸ್ತಿನ ವಿರುದ್ಧ ಇಂದು ಪಕ್ಷದ ವರಿಷ್ಠರು ಕೈಗೊಂಡಿರುವ ನಿರ್ಧಾರವನ್ನು ಸಂಭ್ರಮಿಸಬಾರದೆಂದು ವಿನಂತಿಸುತ್ತೇನೆ ಎಂದು ಪಕ್ಷದ ರಾಜ್ಯ ಅಧ್ಯಕ್ಷ ಬಿವೈ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.