Bangalore, ಫೆಬ್ರವರಿ 24 -- ಬೆಂಗಳೂರು: ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿತರಾಗಿರುವ ವಿಶ್ವಗುರು ಬಸವೇಶ್ವರರ ವಿಚಾರಧಾರೆಯನ್ನು ಪರಿಣಾಮಕಾರಿಯಾಗಿ ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ಈ ವರ್ಷದ ಬಜೆಟ್ ನಲ್ಲಿ ರೂ 100 ಕೋಟಿ ನೀಡುವ ಜೊತೆಗೆ, ಮುಂದಿನ ನಾಲ್ಕು ವರ್ಷಗಳ ಬಜೆಟ್ ನಲ್ಲಿ ತಲಾ 100 ಕೋಟಿಯಂತೆ ಒಟ್ಟು ರೂ 500 ಕೋಟಿ ಅನುದಾನ ನೀಡಬೇಕು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬಸವಣ್ಣನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸಬೇಕು. ಜೊತೆಗೆ, ಬೆಂಗಳೂರಿನಲ್ಲಿ 25 ಎಕರೆ ಪ್ರದೇಶದಲ್ಲಿ ಅಕ್ಷರಧಾಮದ ಮಾದರಿಯಲ್ಲಿ ಬೃಹತ್ 'ಶರಣ ದರ್ಶನ' ಕೇಂದ್ರ ಸ್ಥಾಪಿಸಿ, ಅಲ್ಲಿ, ಉದ್ಯಾನ, ಗ್ರಂಥಾಲಯ, ಅತಿಥಿಕೇಂದ್ರ, ದಾಸೋಹ ಭವನ, ಸಭಾಂಗಣ ನಿರ್ಮಿಸಿ ಪ್ರವಾಸಿ ತಾಣವನ್ನಾಗಿಸಬೇಕು ಎಂಬುದನ್ನು ಭಾಲ್ಕಿ ಮಠದ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಅವರು ಎಲ್ಲರ ಪರವಾಗಿ ಮುಖ್ಯಮಂತ್ರಿಯವರ ಗಮನಕ್ಕೆ ತಂದರು.

ಕಾವೇರಿ ನಿವಾಸದಲ್ಲಿ ಸೋಮವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶ...