ಭಾರತ, ಮಾರ್ಚ್ 1 -- ಮಂಗಳೂರು: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಸಿಸೇರಿಯನ್ ಮಾಡಿದ ಬಳಿಕ ಆಪರೇಶನ್ ಸಂದರ್ಭ ಬಳಸಿದ ಬಟ್ಟೆಯನ್ನು ಹೊಟ್ಟೆಯಲ್ಲೇ ಉಳಿಸಿ ಗಂಭೀರ ನಿರ್ಲಕ್ಷ್ಯ ತೋರಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ವೈದ್ಯರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ಗಗನ್ ದೀಪ್ ಬಂಗಾರಡ್ಕ ಎಂಬವರು ಫೆ.23ರಂದು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು. ವೈದ್ಯಕೀಯ ನಿರ್ಲಕ್ಷ್ಯ ಪ್ರಕರಣವಾದ ಕಾರಣ ಪೊಲೀಸ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಮೆಡಿಕಲ್ ಬೋರ್ಡ್‌ಗೆ ವರದಿ ಸಲ್ಲಿಸಿತ್ತು.

ಸುಪ್ರೀಂ ಕೋರ್ಟ್ ಮಾರ್ಗದರ್ಶಿ ಸೂತ್ರದ ಪ್ರಕಾರ ವೈದ್ಯಕೀಯ ನಿರ್ಲಕ್ಷ್ಯ ಪ್ರಕರಣದಲ್ಲಿ ಮೆಡಿಕಲ್ ಬೋರ್ಡ್‌ಗೆ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ. ಇದೀಗ ವೈದ್ಯಕೀಯ ಮಂಡಳಿ ವರದಿ ಪರಿಶೀಲಿಸಿ, ವೈದ್ಯರ ಕಡೆಯಿಂದ ನಿರ್ಲಕ್ಷ್ಯವಾಗಿದೆ ಎಂದು ವರದಿ ನೀಡಿದ್ದು, ಅದರಂತೆ ಪುತ್ತೂರು ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ಪುತ್ತೂರು ನಗರ ಪೊಲೀಸ್ ಠಾ...