Bangalore, ಮಾರ್ಚ್ 26 -- ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿರುವ ಕುರಿತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಇದಲ್ಲದೇ ಯತ್ನಾಳ್‌ ಕೂಡ ತಮ್ಮ ಪ್ರತಿಕ್ರಿಯೆಯನ್ನು ಹೊರ ಹಾಕಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರು ಏನು ಮಾತನಾಡಿದರು ಎನ್ನುವ ವಿವರಗಳು ಇಲ್ಲಿವೆ.

ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ.

ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬ...