ಭಾರತ, ಏಪ್ರಿಲ್ 2 -- ಬೆಂಗಳೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಒಂದು ವಾರದ ಹಿಂದೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಕುಟುಂಬದ ವಿರುದ್ಧ ಸಮರ ಸಾರುವ ಮೂಲಕವೇ ಇವರು ರಾಜ್ಯಾದ್ಯಂತ ಪ್ರಸಿದ್ಧಿಗೆ ಬಂದರು ಎನ್ನುವುದು ಅತಿಶಯೋಕ್ತಿಯೇನಲ್ಲ.
ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಸಿಗದೆ ಹತಾಶರಾದ ಯತ್ನಾಳ, ಅಂದಿನಿಂದಲೇ ಬಿಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ಪಕ್ಷದ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಟೀಕಾ ಪ್ರಹಾರವನ್ನೇ ನಡೆಸುತ್ತಾ ಬಂದರು. ರಾಜಕಾರಣದ ಆರೋಪಗಳ ಜತೆಗೆ ಬಿ ಎಸ್ ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನೇ ಮಾಡುತ್ತಾ ಬರುತ್ತಿದ್ದಾರೆ. ಉಚ್ಚಾಟನೆಯಾದ ನಂತರ ಸ್ವತಂತ್ರ ಹಕ್ಕಿಯಾದ ಯತ್ನಾಳ, ತಮ್ಮ ಟೀಕೆಯನ್ನು ಮತ್ತಷ್ಟು ಹರಿತಗೊಳಿಸಿದ್ದಾರೆ.
ಮೇಲ್ನೋಟಕ್ಕೆ ಯತ್ನಾಳ ಹೊಸ ಪಕ್ಷವೊಂದನ್ನು ಹುಟ್ಟು ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಧ್ಯಕ್ಕೆ ಅವರಿಗೆ ಬೆಂಬಲವೂ ಕಂಡು ಬರುತ್ತಿದೆ. ಆದರೆ ಅದು ಮಾತನಾಡ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.