ಭಾರತ, ಏಪ್ರಿಲ್ 13 -- ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಜನ ಆಕ್ರೋಶ ಯಾತ್ರೆಯನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ನಾಯಕರಿಗೆ ಘನತೆ ಅಥವಾ ಸಭ್ಯತೆಯ ಕೊರತೆ ಇದೆ ಎಂದು ಹೇಳಿದ್ದಾರೆ. ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಗೆ ಯಾರು ಹೊಣೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಬಿಜೆಪಿ ನೇರ ಹೊಣೆ ಎಂದು ಅವರು ಹೇಳಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ "ಬಿಜೆಪಿ ನಾಯಕರಿಗೆ ಘನತೆ, ಗೌರವವಿಲ್ಲ. ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಗೆ ಯಾರು ಹೊಣೆ? ಈ ಬೆಲೆ ಏರಿಕೆಗೆ ಬಿಜೆಪಿ ನಾಯಕರ ಬಳಿ ಯಾವ ಉತ್ತರಗಳಿವೆ? ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಬಿಜೆಪಿ ನೇರ ಹೊಣೆ ಎಂದಿದ್ದಾರೆ. ಹೆಚ್ಚಿನ ತೆರಿಗೆ ಸಂಗ್ರಹದ ಬಗ್ಗೆಯೂ ಮಾತನಾಡಿದ್ಧಾರೆ.

ಹಾಲಿನ ಬೆಲೆ ಏರಿಕೆಯಿಂದ ಸರ್ಕಾರದ ಖಜಾನೆಗೆ ಹಣ ಬರುವುದಿಲ್ಲ. ಅದು ರೈತರಿಗೆ ಹೋಗುತ್ತದೆ ಎಂದು ಹೇಳಿದ್ದಾರೆ. ಪೆಟ್ರೋಲ್ ಬೆಲೆಗಳು ಕಚ್ಚಾ ತೈಲ...