Bangalore, ಮೇ 9 -- ಬೆಂಗಳೂರು: ಸಿಬಿಐ ಕೋರ್ಟ್ನಿಂದ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಮುಖಂಡ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವರೂ ಆಗಿರುವ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ ಅಪರಾಧಿ ಎಂದು ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಅಸ್ತಿತ್ವದಲ್ಲಿ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.ಜನಪ್ರತಿನಿಧಿಗಳ ಕಾಯ್ದೆಯಡಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಸದಸ್ಯತ್ವ ಸ್ವಾಭಾವಿಕವಾಗಿ ರದ್ದಾಗಲಿದೆ. ಜನಾರ್ದನ ರೆಡ್ಡಿ ಅವರು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ನಂತರವೂ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಆರು ತಿಂಗಳ ಒಳಗೆ ಗಂಗಾವತಿ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಬಹುದು ಎನ್ನುವ ಚರ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.