ಭಾರತ, ಜೂನ್ 13 -- ನವದೆಹಲಿ: 2016ರಲ್ಲಿ ನಡೆದಿದ್ದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಗೌಡರ ಕೊಲೆ ಪ್ರಕರಣದ ಆರೋಪಿಯಾಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಶರಣಾಗತಿಗೆ ಹೆಚ್ಚುವರಿ ಸಮಯಾವಕಾಶ ನೀಡಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ಕುಲಕರ್ಣಿ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

ಈ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನನ್ನು ಕಳೆದ ಶುಕ್ರವಾರ ಸುಪ್ರೀಂ ಕೋರ್ಟ್ ರದ್ದು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಪ್ರಕರಣದ ಸಾಕ್ಷಿಗಳನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಂಪರ್ಕಿಸಿ ಅವರ ಮೇಲೆ ಪ್ರಭಾವ ಬೀರಲು ವಿನಯ ಕುಲಕರ್ಣಿ ಹಾಗೂ ಮತ್ತೊಬ್ಬ ಆರೋಪಿ ಪ್ರಯತ್ನಿಸಿದ್ದಾರೆ. ಜಾಮೀನು ನೀಡುವಾಗ ವಿಧಿಸಿದ್ದ ಷರತ್ತುಗಳ ಉಲ್ಲಂಘನೆಯಾಗಿರುವ ಕಾರಣ ಕುಲಕರ್ಣಿ ಅವರ ಜಾಮೀನನ್ನು ರದ್ದುಪಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ತಿಳಿಸಿತ್ತು. ಒಂದು ವಾರದ ಒಳಗಾಗಿ ಸಂಬಂಧಪಟ್ಟ ವಿಚಾರಣಾ ನ್ಯಾಯ...