ಭಾರತ, ಫೆಬ್ರವರಿ 28 -- BJP President 2025: ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ಮುಂದಿನ ರಾಷ್ಟ್ರೀಯ ಅಧ್ಯಕ್ಷರು ಯಾರು ಎಂಬುದು ಸದ್ಯದ ಕುತೂಹಲ. ಜಗತ್ ಪ್ರಕಾಶ್ ನಡ್ಡಾ (ಜೆಪಿ ನಡ್ಡಾ) ಅವರ ಅವಧಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಅಂದರೆ ಮಾರ್ಚ್ 15ರ ಒಳಗೆ ಬಿಜೆಪಿಯ ಹೊಸ ರಾಷ್ಟ್ರೀಯ ಅಧ್ಯಕ್ಷರ ಹೆಸರು ಘೋಷಣೆಯಾಗಬಹುದು ಎನ್ನುತ್ತಿವೆ ಪಕ್ಷದ ಮೂಲಗಳು. 12 ರಾಜ್ಯಗಳಲ್ಲಿ ಪಕ್ಷದ ಸಂಘಟನಾತ್ಮಕ ಚುನಾವಣೆಗಳು ಪೂರ್ಣಗೊಂಡಿದ್ದು, ಕರ್ನಾಟಕದಲ್ಲಿ ಕೂಡ ರಾಜ್ಯ ಅಧ್ಯಕ್ಷರು ಯಾರು ಎಂಬುದು ಘೋ‍ಷಣೆಯಾಗಲಿದೆ. ಬಿಜೆಪಿಯಲ್ಲಿ ಬಹುತೇಕ ಅವಿರೋಧ ಆಯ್ಕೆಯಾಗುತ್ತವೆ. ಕರ್ನಾಟಕದಲ್ಲಿ ಈ ಬಾರಿ ಚುನಾವಣೆ ನಡೆಯುವುದೇ ಎಂಬ ಕುತೂಹಲವೂ ಇದೆ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ನಡೆಯಬೇಕಾದರೆ ಅದಕ್ಕೂ ಮೊದಲು, ಶೇಕಡಾ 50 ರಷ್ಟು ರಾಜ್ಯಗಳಲ್ಲಿ ಪಕ್ಷದ ಸಾಂಸ್ಥಿಕ ಚುನಾವಣೆಗಳು ಪೂರ್ಣಗೊಳ್ಳುವುದು ಅವಶ್ಯಕ. ಅದಕ್ಕೂ ಮೊದಲು ಬೂತ್, ಮಂಡಲ ಮತ್ತು ಜಿಲ್ಲಾ ಮಟ್ಟದ ಚುನಾವಣೆಗಳು ನಡೆಯುತ್ತವೆ. ಪ್ರಸ್ತುತ, 36 ರಾಜ್ಯಗಳ (28 ರಾಜ್ಯ+ 8 ಕೇ...