ಭಾರತ, ಮಾರ್ಚ್ 19 -- ರಾಮನಗರ: ಬೆಂಗಳೂರು-ಮೈಸೂರು ರಸ್ತೆಯ ಬಿಡದಿಯಲ್ಲಿರುವ ಪ್ರತಿಷ್ಠಿತ ಕಂಪನಿಯ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಬರೆದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕರ್ನಾಟಕದ ಹೈಮದ್ ಹುಸೇನ್ (24) ಮತ್ತು ಸಾದಿಕ್ (20) ಬಂಧಿತ ಆರೋಪಿಗಳು. ಇವರು ಟೊಯೋಟಾ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನದ ಪರ ಬರಹ ಬರೆಯುವುದರ ಜತೆಗೆ ಕನ್ನಡಿಗರ ಬಗ್ಗೆಯೂ ಅವಹೇಳನ ಪದ ಬಳಸಿದ್ದರು. ಹೀಗಾಗಿ ದೇಶದ್ರೋಹದ ಆರೋಪದಡಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಕಾರ್ಖಾನೆಯ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನ ಕೀ ಜೈ, ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಬರೆದಿದ್ದರು. ಜತೆಗೆ ಕನ್ನಡಿಗರನ್ನು ಅವಹೇಳನಕಾರಿ ಭಾಷೆಯಲ್ಲಿ ನಿಂದಿಸಿದ್ದರು. ಈ ಕಾರ್ಖಾನೆಯಲ್ಲಿ 2 ಸಾವಿರಕ್ಕೂ ಹೆಚ್ಚು ಕಾರ್ಮಿಕರಿದ್ದು, ಮೂರು ಪಾಳಿಗಳಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಪ್ರತಿ ಪಾಳಿಯಲ್ಲಿ 600 ಕಾರ್ಮಿಕರು ಕೆಲಸ ಮಾಡುತ್ತಿದ...