ಭಾರತ, ಜೂನ್ 13 -- ಸುಚೇಂದ್ರ ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಪದ್ಮಗಂಧಿ ಚಿತ್ರವೀಗ ಎಲ್ಲ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಅಣಿಗೊಂಡಿದೆ. ಈ ಹಂತದಲ್ಲಿ ವಿಶಿಷ್ಟವಾದೊಂದು ರೀತಿಯಲ್ಲಿ ಚಿತ್ರತಂಡ ಮಾಧ್ಯಮದವರನ್ನು ಮುಖಾಮುಖಿಯಾಗುವ ಮೂಲಕ ಒಟ್ಟಾರೆ ಸಿನಿಮಾ ಬೆಗೆಗಿನ ಒಂದಷ್ಟು ಆಸಕ್ತಿದಾಯಕ ವಿಚಾರಗಳನ್ನು ಹಂಚಿಕೊಂಡಿದೆ. ಈ ಸಂದರ್ಭದಲ್ಲಿ ಸದರಿ ಚಿತ್ರದ ನಿರ್ಮಾಪಕರೂ, ಕಥೆಗಾರರೂ ಆಗಿರುವ ಪ್ರೊ.ಎಸ್.ಆರ್ ಲೀಲಾ ಅವರು ಉಪಸ್ಥಿತರಿದ್ದು ಈ ಸಿನಿಮಾ ಶುರುವಾತಿನ ಬಗ್ಗೆ, ಕಥೆ ಹುಟ್ಟಿನ ಹಿಂದಿರೋ ಬೆರಗಿನ ಬಗ್ಗೆ ಒಂದಷ್ಟು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ಇದೇ ಹೊತ್ತಿನಲ್ಲಿ ಹಾಡುಗಳ ತುಣುಕುಗನ್ನೂ ಪ್ರದರ್ಶಿಸಲಾಗಿದೆ.

ಪದ್ಮಗಂಧಿಯ ಹಾಡುಗಳೆಲ್ಲವೂ ತಯಾರಾಗಿವೆ. ಅವುಗಳ ಒಂದಷ್ಟು ಝಲಕ್ಕುಗಳನ್ನು ಮಾಧ್ಯಮದವರ ಮುಂದೆ ಪ್ರದರ್ಶಿಸಲಾಗಿದೆ. ಈ ಮೂಲಕ ಪದ್ಮಗಂಧಿಯ ಹಾಡುಗಳ ಸಣ್ಣ ಪರಿಚಯವನ್ನು ಪ್ರೇಕ್ಷಕರತ್ತ ತಲುಪಿಸುವ ಪ್ರಯತ್ನವೂ ನಡೆದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಪದ್ಮಗಂಧಿಯ ಹಾಡುಗಳು ಸಂಪೂರ್ಣವಾಗ...