ಭಾರತ, ಮಾರ್ಚ್ 11 -- BPL Card Verification: ಬಜೆಟ್ ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ನಡೆಸುವುದಕ್ಕೆ ಚಿಂತನೆ ನಡೆಸಲಾಗಿದೆ. ಬಿಪಿಎಲ್‌ ಅರ್ಹ ಫಲಾನುಭವಿಗಳನ್ನು ಗುರುತಿಸುವುದಕ್ಕಾಗಿ ಕೇಂದ್ರ ಸರ್ಕಾರ ನಿಗದಿ ಮಾಡಿದ ಮಾನದಂಡವನ್ನು ಪರಿಗಣಿಸಲಾಗುತ್ತದೆ. ಇದಕ್ಕೆ ಸರ್ವಪಕ್ಷಗಳ ಸಹಕಾರ ಬೇಕು ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು. ಅವರು ವಿಧಾನ ಪರಿಷತ್‌ನಲ್ಲಿ ಸೋಮವಾರ (ಮಾರ್ಚ್ 10) ಬಿಜೆಪಿ ಸದಸ್ಯ ಸಿಟಿ ರವಿ ಅವರ ಪ್ರಶ್ನೆಗೆ ಉತ್ತರಿಸುತ್ತ ಈ ವಿಚಾರ ತಿಳಿಸಿದರು.

ವಿಧಾನ ಮಂಡಲಅಧಿವೇಶನ ಮುಗಿದ ಬಳಿಕ ಬಿಪಿಎಲ್‌ ಕಾರ್ಡ್‌ಗಳ ಪರಿಷ್ಕರಣೆಗೆ ಚಿಂತನೆ ನಡೆಸಲಾಗಿದೆ. ಕೇಂದ್ರ ಸರ್ಕಾರ ನಿಗದಿ ಮಾಡಿರುವ ಬಿಪಿಎಲ್ ಮಾನದಂಡಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗುತ್ತಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಕರ್ನಾಟಕದಲ್ಲಿ 1.10 ಕೋಟಿ ಬಿಪಿಎಲ್ ಕಾರ್ಡುದಾರರಿದ್ದು, ಈ ಪೈಕಿ 20 ಲಕ್ಷ ಅನರ್ಹ ಫಲಾನುಭವಿಗಳಿರುವುದಾಗಿ ಅಂದಾಜಿಸಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.

ಕಳೆದ ...