ಭಾರತ, ಫೆಬ್ರವರಿ 12 -- ಬೆಂಗಳೂರು: ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ-2024 ಕುರಿತು ಪರಿಶೀಲನೆ ನಡೆಸಲು ರಚಿಸಲಾಗಿರುವ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿ ಸಾರ್ವಜನಿಕರ ಅಭಿಪ್ರಾಯಗಳನ್ನು ಸಂಗ್ರಹಿಸಲು ಸಾರ್ವಜನಿಕ ಸಭೆಗಳನ್ನು ನಡೆಸುತ್ತಿದೆ. ಈ ಸಭೆಗಳಲ್ಲಿ ಸಾರ್ವಜನಿಕರು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯನ್ನು ಹಲವು ಪಾಲಿಕೆಗಳನ್ನಾಗಿ ರಚಿಸುವ ಉದ್ದೇಶ ಹೊಂದಿದ್ದು, ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಿಶೇಷವಾಗಿ ಆಸ್ತಿ ತೆರಿಗೆಯನ್ನು ಒಂದು ಪಾಲಿಕೆಯಿಂದ ಮತ್ತೊಂದು ಪಾಲಿಕೆಯೊಂದಿಗೆ ಹಂಚಿಕೊಳ್ಳಲು ವಿರೋಧ ವ್ಯಕ್ತವಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಅವರು ಮಸೂದೆಯ ಉದ್ದೇಶಗಳನ್ನು ವಿವರಿಸುತ್ತಾ, ಪ್ರಸ್ತುತ ಮಸೂದೆಯು ಬಿಬಿಎಂಪಿಯನ್ನು ಹತ್ತು ಪಾಲಿಕೆಗಳನ್ನಾಗಿ ವಿಭಜಿಸುವ ಉದ್ದೇಶ ಹೊಂದಿದೆ. ಪ್ರತಿ ಪಾಲಿಕೆಗೂ ಪ್ರತ್ಯೇಕ ಮೇಯರ್‌, ಆಯುಕ್ತರು, ಸ್ಥಾಯಿ ಸಮಿತಿಗಳು ಮತ್ತು ವಾರ್ಡ್‌ ಸಮಿತಿಗಳು ಇರುತ್ತವೆ. ಎಲ್ಲ ಪಾಲಿಕೆಗಳ ಮೇಲೂ ಗ್ರೇಟರ್‌ ಬೆಂಗಳೂರು ಪ್...