ಭಾರತ, ಫೆಬ್ರವರಿ 24 -- ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು(ಬಿಬಿಎಂಪಿ) ಆಡಳಿತಾತ್ಮಕ ದೃಷ್ಟಿಯಿಂದ 7 ಪಾಲಿಕೆಗಳನ್ನಾಗಿ ವಿಭಜಿಸಿ ಪುನರ್‌ ರಚನೆ ಮಾಡುವ ವರದಿಯನ್ನು ಜಂಟಿ ಸದನ ಸಮಿತಿಯು ವಿಧಾನಸಭಾಧ್ಯಕ್ಷ ಯು. ಟಿ. ಖಾದರ್‌ ಅವರಿಗೆ ಸಲ್ಲಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯ ಅಧ್ಯಯನಕ್ಕಾಗಿ ಕಾಂಗ್ರೆಸ್‌ ಶಾಸಕ ರಿಜ್ವಾನ್‌ ಅರ್ಷದ್‌ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿ ವಿಧಾನಸೌಧದಲ್ಲಿ ವರದಿಯನ್ನು ಸಲ್ಲಿಸಿದೆ. ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಎಸ್.ಟಿ.ಸೋಮಶೇಖರ್, ಪ್ರಿಯಾಕೃಷ್ಣ, ಎಸ್.‌ ಶಿವಣ್ಣ, ಶ್ರೀನಿವಾಸ್, ಜವರಾಯಿಗೌಡ ಉಪಸ್ಥಿತರಿದ್ದರು.

ಹೊಸದಾಗಿ ಅಸ್ತಿತ್ವಕ್ಕೆ ಬರುವ ಪ್ರತಿ ಪಾಲಿಕೆಗಳಿಗೆ 100 ರಿಂದ 125 ವಾರ್ಡ್‌ಗಳಿರಬೇಕು. ಮೇಯರ್ ಅವಧಿ 30 ತಿಂಗಳ ಅವಧಿ ಇರಬೇಕು. ಹೊಸ ಪಾಲಿಕೆಗಳಿಗೆ ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ ಪಾಲಿಕೆ ಎಂದು ಹೆಸರಿಡಬಹುದು ಎಂದೂ ಶಿಫಾರಸ್ಸು ಮಾಡಲಾಗಿದೆ. ಈ ಸಮಿತಿಯು ನಗರದ ಎ...