ಭಾರತ, ಜುಲೈ 17 -- ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಮುಖ ಜಂಕ್ಷನ್ ಗಳ ಸಮಗ್ರ ಅಭಿವೃದ್ಧಿಗೆ ವಿನ್ಯಾಸ ರೂಪಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವಲಯ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಈಗಾಗಲೇ ಹಲವಾರು ಜಂಕ್ಷನ್‌ಗಳ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದು, ಇನ್ನಿತರೆ ಜಂಕ್ಷನ್ ಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಮಗ್ರ ಅಭಿವೃದ್ಧಿಗಾಗಿ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಸ್ತುತ 53 ಪ್ರವಾಹ ಪೀಡಿತ ಪ್ರದೇಶಗಳಿದ್ದು, ಈಗಾಗಲೇ 4 ಕಡೆ ಸಮಸ್ಯೆ ಬಗೆಹರಿಸಲಾಗಿದೆ. ಇನ್ನು 49 ಕಡೆ ಸಮಸ್ಯೆ ಬಗೆಹರಿಸಬೇಕಿದ್ದು, 22 ಕಡೆ ವರ್ಲ್ಡ್ ಬ್ಯಾಂಕ್ ಅನುದಾನದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಎಲ್ಲಿಯೂ ಯಾವುದೇ ರೀತಿಯ ಸಮಸ್ಯೆ ಆಗದಂತೆ ತಾತ್ಕಾಲಿಕ ಕ್ರಮಗಳನ್ನು ಕೈಗೊಂಡು ಮುಂಜಾಗ್ರತಾ ಕ್ರಮಗಳನ್ನು...