ಭಾರತ, ಜನವರಿ 31 -- ಮಹಿಳೆಯರಲ್ಲಿ ಕೆಲವು ಆರೋಗ್ಯ ಸಮಸ್ಯೆಗಳು ವಯಸ್ಸಾದಂತೆ ಹೆಚ್ಚು ಕಾಣಿಸಿಕೊಳ್ಳುತ್ತವೆ. ಋತುಬಂಧ, ಹಾರ್ಮೋನುಗಳ ಅಸಮತೋಲನ, ಮೂಳೆ ದೌರ್ಬಲ್ಯ ಇವು ಮಹಿಳೆಯರನ್ನು ಕಾಡುವ ಸಾಮಾನ್ಯ ಸಮಸ್ಯೆಗಳಾಗಿವೆ. ಚಿಕ್ಕ ವಯಸ್ಸಿನಲ್ಲಿ ಪಿಸಿಒಎಸ್ (ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್) ಹೆಚ್ಚಳವೂ ಇದಕ್ಕೆ ಕಾರಣ. ಈ ಸಮಸ್ಯೆಗಳಿಂದ ಬಳಲುತ್ತಿದ್ದರೆ, ಹೆಚ್ಚು ಆರೋಗ್ಯವಾಗಿರಲು ಈ ಮೂರು ರೀತಿಯ ಬೀಜಗಳನ್ನು ಸೇವಿಸಬೇಕು. ಇದರಿಂದ ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳು ಸಿಗುತ್ತವೆ. ಯಾವ ಮೂರು ಬಗೆಯ ಬೀಜಗಳನ್ನು ಸೇವಿಸುವುದು ಉತ್ತಮ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಬಿಳಿ ಎಳ್ಳು ಬೀಜಗಳು: ಬಿಳಿ ಎಳ್ಳು ಬೀಜಗಳು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಕ್ಯಾಲ್ಸಿಯಂ, ಕಬ್ಬಿಣ ಮತ್ತು ಮೆಗ್ನೀಸಿಯಮ್ ಹೇರಳವಾಗಿದೆ. ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಚರ್ಮದ ಆರೋಗ್ಯಕ್ಕೂ ಪ್ರಯೋಜನಕಾ...