ಭಾರತ, ಮಾರ್ಚ್ 23 -- Karnataka Weather March 23: ಬೆಂಗಳೂರು, ಬೀದರ್, ದಕ್ಷಿಣ ಕನ್ನಡ ಜಿಲ್ಲೆ ಸೇರಿ 21 ಜಿಲ್ಲೆಗಳಲ್ಲಿ ಇಂದು (ಮಾರ್ಚ್ 23) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಭಾಗದಲ್ಲಿ ನಿನ್ನೆ (ಮಾರ್ಚ್ 22) ಸಂಜೆ ಮಳೆಯಾಗಿದ್ದು, ಒಬ್ಬ ಬಾಲಕಿ ಮೃತಪಟ್ಟು ಅನೇಕ ಕಡೆಗಳಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಇಂದು ಕೂಡ ಬೆಂಗಳೂರಿನಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ವರದಿ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ಶುಕ್ರವಾರ (ಮಾರ್ಚ್ 21) ಅಪರಾಹ್ನ ಪ್ರಕಟಿಸಿದ ಹವಾಮಾನ ಮುನ್ಸೂಚನೆ ವರದಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರವಾಗಿ ಅಥವಾ ಸಾಧಾರಣ ಮಳೆ ಅಥವಾ ಗುಡುಗು ಮಿಂಚು ಸಹಿತ ಮಳೆಯಾಗಬಹುದು, ಮಂಡ್ಯ ಮತ್ತು ಮೈಸೂರು...